ETV Bharat / state

ಹಾವೇರಿ ಜಿಲ್ಲಾಸ್ಪತ್ರೆಗೆ 38 ಬ್ಲ್ಯಾಕ್ ಫಂಗಸ್ ರೋಗಿಗಳು ದಾಖಲು - ಹಾವೇರಿ ಜಿಲ್ಲಾಸ್ಪತ್ರೆ ಸುದ್ದಿ

ಜಿಲ್ಲಾಸ್ಪತ್ರೆಗೆ ಕ್ಲಿಷ್ಟಕರವಾದ ಕೇಸ್‌ಗಳನ್ನ ದಾವಣಗೆರೆ ಮತ್ತು ಹುಬ್ಬಳ್ಳಿಯ ಕಿಮ್ಸ್‌ಗೆ ಕಳಿಸಿಕೊಡಲಾಗುತ್ತದೆ. ಅಲ್ಲಿ ಚಿಕಿತ್ಸೆ ಪಡೆದ ನಂತರ ಸಾಮಾನ್ಯ ರೋಗಿಗಳಾಗುತ್ತಿದ್ದಂತೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತದೆ..

haveri
haveri
author img

By

Published : Jun 14, 2021, 10:15 PM IST

ಹಾವೇರಿ : ಜಿಲ್ಲಾಸ್ಪತ್ರೆಗೆ ಈವರೆಗೊ 38 ಬ್ಲ್ಯಾಕ್ ಫಂಗಸ್ ರೋಗಿಗಳು ದಾಖಲಾಗಿದ್ದಾರೆ ಎಂದು ಹಾವೇರಿ ಜಿಲ್ಲಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪರಮೇಶ್ ಹಾವನೂರು ತಿಳಿಸಿದ್ದಾರೆ. ಇದರಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಾವನೂರು ತಿಳಿಸಿದರು. 17 ಕೇಸ್‌ಗಳನ್ನ ಸರ್ಜರಿ ಕಾರಣಕ್ಕಾಗಿ ಮುಂದಿನ ಆಸ್ಪತ್ರೆಗಳಿಗೆ ಕಳಿಸಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ 19 ಬ್ಲ್ಯಾಕ್ ಫಂಗಸ್ ರೋಗಿಗಳಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮೊದಲು ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿತ್ತು. ಇದೀಗ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬೇಕಾಗಿರುವ ಔಷಧಿಗಳು ಜಿಲ್ಲಾಸ್ಪತ್ರೆಗೆ ಬಂದಿವೆ. ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ. 19 ಬ್ಲಾಕ್ ಫಂಗಸ್ ಕೇಸ್‌ಗಳಲ್ಲಿ ಮೂರು ಕೇಸ್‌ಗಳು ಕೋವಿಡ್ ಕೇಸ್‌ಗಳಾಗಿದ್ದು, ಅವರಿಗೂ ಸಹ ಚಿಕಿತ್ಸೆ ನೀಡುತ್ತಿದ್ದೇವೆ.

ಸರ್ಕಾರದ ಆದೇಶದಂತೆ ಜಿಲ್ಲಾಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಸರ್ಜರಿಗೆ ನಮ್ಮಲ್ಲಿ ತಜ್ಞರಿಲ್ಲದ ಕಾರಣ ಕಿಮ್ಸ್‌ಗೆ ಕಳಿಸಲಾಗುತ್ತಿದೆ. ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳು ಮತ್ತೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಾವನೂರು ತಿಳಿಸಿದರು.

ಜಿಲ್ಲೆಯ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಡಿಹೆಚ್‌ಒ ಹಾವನೂರು ಅವರು ಮನವಿ ಮಾಡಿದರು. ಜಿಲ್ಲಾಸ್ಪತ್ರೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಚಿಕಿತ್ಸೆಯನ್ನ ಕೋವಿಡ್ ಮತ್ತು ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ನೀಡಲಾಗುತ್ತಿದೆ.

ಜಿಲ್ಲಾಸ್ಪತ್ರೆಗೆ ಕ್ಲಿಷ್ಟಕರವಾದ ಕೇಸ್‌ಗಳನ್ನ ದಾವಣಗೆರೆ ಮತ್ತು ಹುಬ್ಬಳ್ಳಿಯ ಕಿಮ್ಸ್‌ಗೆ ಕಳಿಸಿಕೊಡಲಾಗುತ್ತದೆ. ಅಲ್ಲಿ ಚಿಕಿತ್ಸೆ ಪಡೆದ ನಂತರ ಸಾಮಾನ್ಯ ರೋಗಿಗಳಾಗುತ್ತಿದ್ದಂತೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತದೆ ಎಂದು ಡಾ. ಹಾವನೂರು ತಿಳಿಸಿದರು.

ಇದನ್ನೂ ಓದಿ: ನೊವಾವಕ್ಸ್​ ಲಸಿಕೆ ಶೇ.90ರಷ್ಟು ಸುರಕ್ಷಿತ : ಅಧ್ಯಯನದಿಂದ ಮಾಹಿತಿ ಬಹಿರಂಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.