ಹಾವೇರಿ: ಜಿಲ್ಲೆಯಲ್ಲಿ 42 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಪ್ರಕಟಿಸಿದೆ. ಸದ್ಯ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 2,525ಕ್ಕೇರಿದಂತಾಗಿದೆ.
ಸೋಮವಾರದಂದು ವಿವಿಧ ಕೋವಿಡ್ ಆಸ್ಪತ್ರೆಗಳಿಂದ 32 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾವೇರಿ ತಾಲೂಕಿನಲ್ಲಿ 18, ಹಾನಗಲ್ ಮತ್ತು ಸವಣೂರು ತಾಲೂಕುಗಳಲ್ಲಿ ತಲಾ 5 ಪ್ರಕರಣಗಳು, ರಾಣೆಬೆನ್ನೂರು 4, ಶಿಗ್ಗಾವಿ ಮತ್ತು ಹಿರೇಕೆರೂರು ತಾಲೂಕಿನಲ್ಲಿ ತಲಾ 3 ಪ್ರಕರಣಗಳು ವರದಿಯಾಗಿವೆ. ಬ್ಯಾಡಗಿ ತಾಲೂಕಿನಲ್ಲಿ ಎರಡು ಬೇರೆ ಇತರೆ 2 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಕೊರೊನಾದಿಂದಾಗಿ 4 ಜನ ಸಾವನ್ನಪ್ಪಿರುವುದಾಗಿ ಜಿಲ್ಲಾಡಳಿತ ದೃಢಿಕರಿಸಿದೆ. ಇದುವರೆಗೊ ಜಿಲ್ಲೆಯಲ್ಲಿ 1,660 ಸೋಂಕಿತರು ಗುಣಮುಖರಾಗಿದ್ದಾರೆ. 410 ಜನರನ್ನ ಹೋಂ ಐಸೋಲೇಷನ್‌ನಲಿದ್ದು, 399 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.