ಹಾವೇರಿ: ಜಿಲ್ಲೆಯಲ್ಲಿಂದು 45 ಜನರಿಗೆ ಕೊರೊನಾ ದೃಢಪಟ್ಟಿರುವುದಾಗಿ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಂಕಿತರ ಸಂಖ್ಯೆ 10,457 ಕ್ಕೇರಿದಂತಾಗಿದೆ.
ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಗುರುವಾರ 50 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬ್ಯಾಡಗಿ ತಾಲೂಕಿನಲ್ಲಿ 03, ಹಾನಗಲ್ ಮತ್ತು ಹಾವೇರಿ ತಾಲೂಕಿನಲ್ಲಿ ತಲಾ 10, ಹಿರೇಕೆರೂರು ಮತ್ತು ಶಿಗ್ಗಾವಿ ತಾಲೂಕಿನಲ್ಲಿ ತಲಾ 04, ರಾಣೆಬೆನ್ನೂರು ತಾಲೂಕಿನಲ್ಲಿ 12, ಸವಣೂರು ತಾಲೂಕಿನಲ್ಲಿ 02 ಜನರು ಸೇರಿದಂತೆ ಒಟ್ಟು 45 ಜನರಿಗೆ ಕೊರೊನಾ ತಗುಲಿದೆ.
ಕೊರೊನಾದಿಂದ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 188 ಕ್ಕೇರಿದಂತಾಗಿದೆ. ಜಿಲ್ಲೆಯಲ್ಲಿ 222 ಜನ ಹೋಂ ಐಸೋಲೇಷನ್ನಲ್ಲಿದ್ದು, 48 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.