ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಕೊರೊನಾ 45 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಕುರಿತಂತೆ ಹೆಲ್ತ್ ಬುಲೆಟಿನ್ ಹೊರಡಿಸಿರುವ ಜಿಲ್ಲಾಡಳಿತ, ಹಾವೇರಿ ತಾಲೂಕು ಒಂದರಲ್ಲೇ 21 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.
ಉಳಿದಂತೆ ಶಿಗ್ಗಾಂವಿ ತಾಲೂಕು 9, ರಾಣೆಬೆನ್ನೂರು ತಾಲೂಕು 6, ಸವಣೂರು ತಾಲೂಕು 5 ಮತ್ತು ಹಾನಗಲ್ ತಾಲೂಕಿನಲ್ಲಿ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 275ಕ್ಕೇರಿದಂತಾಗಿದೆ. ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಎಂಟು ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 116 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಮೂವರು ಕೊರೊನಾದಿಂದ ಸಾವನ್ನಪ್ಪಿದ್ದು, 156 ಜನರಲ್ಲಿ ಕೊರೊನಾ ಸಕ್ರಿಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.