ETV Bharat / state

ಹಾವೇರಿಯಲ್ಲಿ 49 ಕೋವಿಡ್ ಕೇಸ್‌ಗಳು ಪತ್ತೆ

author img

By

Published : Aug 1, 2020, 7:21 PM IST

49 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿಗೊಳಗಾದವರ ಸಂಖ್ಯೆ 1,040ಕ್ಕೆ ತಲುಪಿದೆ. ಈ ಪೈಕಿ 570 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

Haveri corona case
Haveri corona case

ಹಾವೇರಿ: ಇಂದು 49 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗುವ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

ಹಾವೇರಿ ತಾಲೂಕಿನಲ್ಲಿ 18, ಶಿಗ್ಗಾವಿ 7, ಸವಣೂರು, ರಾಣೆಬೆನ್ನೂರು ಮತ್ತು ಹಿರೇಕೆರೂರು ತಾಲೂಕುಗಳಲ್ಲಿ ತಲಾ 6, ಹಾನಗಲ್ ತಾಲೂಕಿನಲ್ಲಿ ನಾಲ್ಕು ಮತ್ತು ಬ್ಯಾಡಗಿ ತಾಲೂಕಿನಲ್ಲಿ ಎರಡು ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 1,040ರಷ್ಟಾಗಿದೆ.

ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 13 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 570 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿರುತ್ತಾರೆ. ಸದ್ಯ 449 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ 6 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.