ಹಾವೇರಿ: ಕಳೆದ 8 ತಿಂಗಳಿನಿಂದ 65 ವರ್ಷದ ವೃದ್ದನೋರ್ವ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಯಲ್ಲಪ್ಪ ಗಾಳಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ. 15 ವರ್ಷದ ಬಾಲಕಿ ಮೇಲೆ ವೃದ್ದ ಕಳೆದ ಎಂಟು ತಿಂಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಬಾಲಕಿ ಐದು ತಿಂಗಳ ಗರ್ಭಿಣಿ ಎಂಬುದನ್ನ ತಿಳಿಸಿದ್ದಾರೆ.
ಈ ಕುರಿತಂತೆ ಪೋಷಕರು ಬಾಲಕಿಯ ಬಳಿ ವಿಚಾರಿಸಿದಾಗ ವೃದ್ದ ಅತ್ಯಾಚಾರ ನಡೆಸಿರುವುದನ್ನು ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಹಾವೇರಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ದನನ್ನ ಬಂಧಿಸಿದ್ದಾರೆ.