ಹಾವೇರಿ: ಜಿಲ್ಲೆಯಲ್ಲಿ ಇಂದು 66 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,579ಕ್ಕೆ ಏರಿಕೆಯಾಗಿದೆ.
ರಾಣೆಬೆನ್ನೂರು ತಾಲೂಕಿನಲ್ಲಿ 27, ಹಾವೇರಿ ತಾಲೂಕಿನಲ್ಲಿ 22, ಹಾನಗಲ್ ತಾಲೂಕಿನಲ್ಲಿ 6 ಪ್ರಕರಣಗಳು ವರದಿಯಾಗಿವೆ. ಹಿರೇಕೆರೂರು ತಾಲೂಕಿನಲ್ಲಿ 5, ಶಿಗ್ಗಾವಿ ತಾಲೂಕಿನಲ್ಲಿ 03, ಸವಣೂರು ತಾಲೂಕಿನಲ್ಲಿ 02 ಮತ್ತು ಬ್ಯಾಡಗಿ ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. 142 ಜನರನ್ನು ಮನೆಯಲ್ಲಿ ಐಸೊಲೇಷನ್‌ಗೆ ಒಳಪಡಿಸಲಾಗಿದೆ.
580 ಜನ ಸೋಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 825 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇಂದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾಡಳಿತ ತಿಳಿಸಿದೆ.