ETV Bharat / state

ಶಿವಮೊಗ್ಗ, ಹಾವೇರಿಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ - ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭಾಗಿ

ಇಂದು ನಾಡಿನಾದ್ಯಂತ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅದರಂತೆ ಶಿವಮೊಗ್ಗ ಹಾಗೂ ಹಾವೇರಿಯಲ್ಲೂ ಸಡಗರದಿಂದ ನಾಡ ಹಬ್ಬವನ್ನು ಆಚರಿಸಲಾಯಿತು..

66th Kannada rajyotsava celebration
66ನೇ ಕನ್ನಡ ರಾಜೋತ್ಸವ ಸಂಭ್ರಮ
author img

By

Published : Nov 1, 2021, 4:40 PM IST

Updated : Nov 1, 2021, 5:16 PM IST

ಶಿವಮೊಗ್ಗ: ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿ, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಗರದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು ಎಂಬ ನಾಡಗೀತೆಯನ್ನು ಹುಯಿಲಗೋಳ ನಾರಾಯಣ ರಾಯರು ಕರ್ನಾಟಕದ ಏಕೀಕರಣದ ಚಳವಳಿ ಸಂದರ್ಭದಲ್ಲಿ ಹಾಡುವ ಮೂಲಕ ಚಳವಳಿಗೆ ಹುರುಪು ನೀಡಿದ್ದರು.

ಅನೇಕ ಜನರ ಸುದೀರ್ಘ ಹೋರಾಟದ ಪರವಾಗಿ 1973 ನವೆಂಬರ್​ 1 ಹೊಸ ರಾಜ್ಯವಾಗಿ ಕರ್ನಾಟಕ ಅಸ್ತಿತ್ವಕ್ಕೆ ಬಂದಿತು. ನಮ್ಮ ರಾಜ್ಯಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಎಂದು ಇತಿಹಾಸವನ್ನು ಮೆಲುಕು ಹಾಕಿದರು.

ಸಿಎಂ ಬೊಮ್ಮಯಿರವರ ನೇತೃತ್ಚದ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗವಾಕಾಶ ಕಲ್ಲಿಸಲು ರಾಷ್ಟ್ರೀಯ ಗ್ರಾಮೀಣ ಜೀವಮೋಪಾಯ ಯೋಜನೆಯಡಿ ವೃತ್ತಿ ತರಬೇತಿ ನೀಡಲಾಗುತ್ತಿದೆ.

ಈಗಾಗಲೇ 30 ಜನ ಸ್ವಸಹಾಯ ಸಂಘದ ಮಹಿಳೆಯರಿಗೆ ಚಾಲನಾ ತರಬೇತಿ ನೀಡಲಾಗಿದೆ. ಮುಂದಿನ ತಿಂಗಳು 185 ಮಹಿಳೆಯರಿಗೆ ತರಬೇತಿ ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.

ಹಾವೇರಿಯಲ್ಲಿ ಕಳೆಗಟ್ಟಿದ ಕನ್ನಡ ರಾಜ್ಯೋತ್ಸವ : ಇಂದು ಜಿಲ್ಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿ ಬಳಿಕ ತೆರದ ವಾಹನದಲ್ಲಿ ತೆರಳಿದ ಸಚಿವರು, ವಿವಿಧ ಸ್ತಬ್ಧ ಚಿತ್ರಗಳಿಗೆ ಗೌರವ ವಂದನೆ ಸಲ್ಲಿಸಿದರು.

ಹಾವೇರಿಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಈ ವೇಳೆ ಶುಕ್ರವಾರ ನಿಧನರಾದ ನಟ ಪುನೀತ್​ ರಾಜ್​​ ಕುಮಾರ್​ ಅವರಿಗೆ ವಂದನೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಜಿಲ್ಲೆಯ ಸಾಧಕರಿಗೆ ಸನ್ಮಾನ ಮಾಡಲಾಯಿತು.

ಕೊರೊನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್, ಶಾಸಕ ನೆಹರು ಓಲೇಕಾರ್, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ಮತ್ತು ಎಸ್ಪಿ ಹನುಮಂತರಾಯ ಸೇರಿದಂತೆ ಇತರರು ಹಾಜರಾಗಿದ್ದರು.

ಇದನ್ನೂ ಓದಿ: ಢವ.. ಢವ.. ಸಿಂದಗಿ, ಹಾನಗಲ್ ಉಪಚುನಾವಣೆ.. ನಾಳೆ ಮತ ಎಣಿಕೆ..

Last Updated : Nov 1, 2021, 5:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.