ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ 80 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲಾಡಳಿತ ಈ ಕುರಿತಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 9,373 ಕ್ಕೇರಿಕೆಯಾಗಿದೆ. ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 88 ಜನರು ಮಂಗಳವಾರ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಕೋವಿಡ್ಗೆ 174 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಜಿಲ್ಲೆಯಲ್ಲಿ 683 ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 255 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಬ್ಯಾಡಗಿ ತಾಲೂಕಿನಲ್ಲಿ 09, ಹಾನಗಲ್ ತಾಲೂಕಿನಲ್ಲಿ 03, ಹಾವೇರಿ ತಾಲೂಕಿನಲ್ಲಿ 13, ಹಿರೇಕೆರೂರು ತಾಲೂಕಿನಲ್ಲಿ 05, ರಾಣೆಬೆನ್ನೂರು ತಾಲೂಕಿನಲ್ಲಿ 26, ಸವಣೂರು ತಾಲೂಕಿನಲ್ಲಿ 01 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 23 ಜನರಿಗೆ ಸೇರಿದಂತೆ ಇಂದು ಒಟ್ಟು 80 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.