ETV Bharat / state

ಹಾವೇರಿ: 86ನೇ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ - ಈಟಿವಿ ಭಾರತ ಕನ್ನಡ

86ನೇ ಸಾಹಿತ್ಯ ಸಮ್ಮೇಳನ ಅಂಗವಾಗಿ ಇಂದು ಹಾವೇರಿಯಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಯಿತು.

Kn_hvr_
86ನೇ ಸಾಹಿತ್ಯ ಸಮ್ಮೇಳನದ ಲಾಂಛನ
author img

By

Published : Oct 29, 2022, 7:29 PM IST

ಹಾವೇರಿ: 2023ರ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನಗರದಲ್ಲಿ ಮೂರು ದಿನಗಳ ಕಾಲ ಐತಿಹಾಸಿಕವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

ಹಾವೇರಿಯಲ್ಲಿ 86ನೇ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಅವರು, ಸಮ್ಮೇಳನ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ಜನಪ್ರತಿನಿಧಿಗಳ, ಅಧಿಕಾರಿಗಳ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿರುವ ಸುಮಾರು 21 ಸಮಿತಿ ರಚನೆ ಮಾಡಲಾಗಿದೆ. ಸುಮಾರು 25 ಸಾವಿರ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ವಿಚಾರ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ ಪ್ರತಿನಿತ್ಯ 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸಮ್ಮೇಳನ ನಡೆಯುವ ದಿನಗಳಂದು ದಸರಾ ವೇಳೆ ಮೈಸೂರು ದೀಪಾಲಂಕಾರ ಮಾಡಿದಂತೆ ಹಾವೇರಿ ನಗರಕ್ಕೆ ದೀಪಾಲಂಕಾರ ಮಾಡಲಾಗುವುದು. ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾದಿಕಾರಿಯಿಂದ ಹಿಡಿದು ಜಿಲ್ಲಾಧಿಕಾರಿವರೆಗೆ ಎಲ್ಲರೂ ಸಾಹಿತ್ಯ ಸಮ್ಮೇಳನಕ್ಕೆ ಬದ್ದತೆ ತೋರಿಸಬೇಕು. ರಾಜ್ಯದ ಮುಖ್ಯಮಂತ್ರಿ ಹಾವೇರಿ ಜಿಲ್ಲೆಯವರು, ಕಸಾಪ ರಾಜ್ಯಾಧ್ಯಕ್ಷರು ಸಹ ಹಾವೇರಿ ಜಿಲ್ಲೆಯವರು. ಹಾಗಾಗಿ ಅರ್ಥಪೂರ್ಣ ಸಮ್ಮೇಳನ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಬ್ಬಾರ್ ತಿಳಿಸಿದರು.

86ನೇ ಸಾಹಿತ್ಯ ಸಮ್ಮೇಳನದ ಕುರಿತು ಹೇಳಿಕೆ

ಇದೇ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ್, ಎರಡು ವರ್ಷಗಳ ಕಾಲ ಕೊರೊನಾ ಕಾರಣದಿಂದಾಗಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸ್ಥಗಿತಗೊಂಡಿತ್ತು. ಇದೀಗ ಮೂರು ದಿನಗಳ ಸಮ್ಮೇಳನದಲ್ಲಿ ಒಂದು ಪ್ರಧಾನ ವೇದಿಕೆ ಮತ್ತು ಎರಡು ಉಪವೇದಿಕೆ ನಿರ್ಮಿಸಿ, ಜನವರಿ 6 ರಂದು ಭವ್ಯವಾದ ಮೆರವಣಿಗೆ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಸಾಹಿತ್ಯ ಸಮ್ಮೇಳನಕ್ಕೆ ಐದು ಸಾವಿರ ಸ್ವಯಂ ಸೇವಕರ ಬಳಕೆಗೆ ಚಿಂತನೆ ಮಾಡಲಾಗಿದೆ. ಸಮ್ಮೇಳನಕ್ಕೆ ನಿಗದಿಪಡಿಸಿದಂತೆ ಈಗಾಗಲೇ 20 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಶಿರಸಿ ಸಿದ್ದಾಪುರದಿಂದ ಕನ್ನಡ ರಥ ಹೊರಡಿಸುವ ಕುರಿತಂತೆ ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಷಿ ತಿಳಿಸಿದ್ದು, ಇದನ್ನ ಅಂತಿಮಗೊಳಿಸುವುದಾಗಿ ಹೇಳಿದರು. ಇನ್ನು, ಹಾವೇರಿ ಜಿಲ್ಲಾ ನೌಕರರ ಸಂಘದ ಒಂದು ದಿನದ ವೇತನದಿಂದ ಜಮೆಯಾದ ಒಟ್ಟು 1 ಕೋಟಿ 80 ಲಕ್ಷ ರೂಪಾಯಿ ಹಣವನ್ನು ಸಮ್ಮೇಳನಕ್ಕೆ ನೀಡಲು ಮುಂದಾಗಿರುವುದು ಅಭಿನಂದನಾರ್ಹ ಎಂದು ಸಚಿವ ಸುನಿಲ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ, 86ನೇ ಸಾಹಿತ್ಯ ಸಮ್ಮೇಳನ ಈ ಹಿಂದೆ ನಡೆದ 85 ಸಮ್ಮೇಳನಗಳಿಗಿಂತ ವಿಭಿನ್ನ, ವಿಶೇಷ ಮತ್ತು ವಿಶಿಷ್ಟವಾಗಿರುವಂತೆ ಆಚರಿಸುವುದಾಗಿ ತಿಳಿಸಿದರು. ಸಮ್ಮೇಳನದ ಲಾಂಛನದಲ್ಲಿ ಹಾವೇರಿ ಜಿಲ್ಲೆಯ ಸಾಹಿತ್ಯಿಕ, ಸಾಂಸ್ಕೃತಿಕ ತಾಣಗಳ ಮಹತ್ವ ನೀಡಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಬಿಲ್ಲವ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಪಾದಯಾತ್ರೆ: ಪ್ರಣವಾನಂದ ಸ್ವಾಮೀಜಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.