ETV Bharat / state

ಹಾವೇರಿಯಲ್ಲಿ 9 ಕೊರೊನಾ ಪ್ರಕರಣ ಪತ್ತೆ: 96 ಮಂದಿ ಗುಣಮುಖ

ಹಾವೇರಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ನಿನ್ನೆ 96 ಜನ ಗುಣಮುಖರಾಗಿ ಮನೆಗೆ ತೆರಳಿದ್ದು, ಹೊಸದಾಗಿ 9 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಹಾವೇರಿ
ಹಾವೇರಿ
author img

By

Published : Oct 26, 2020, 7:07 AM IST

ಹಾವೇರಿ: ಜಿಲ್ಲೆಯಲ್ಲಿ ನಿನ್ನೆ 9 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10,337ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ನಿನ್ನೆ 96 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಿರೇಕೆರೂರು, ಶಿಗ್ಗಾಂವಿ ತಾಲೂಕುಗಳಲ್ಲಿ ನಿನ್ನೆ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.

ಹಾವೇರಿ ತಾಲೂಕಿನಲ್ಲಿ ನಾಲ್ಕು, ರಾಣೆಬೆನ್ನೂರು ತಾಲೂಕಿನಲ್ಲಿ 3, ಸವಣೂರು ತಾಲೂಕಿನಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ 268 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಮತ್ತು 84 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.