ಶಿಗ್ಗಾಂವಿ : ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೌಳೇರ ದಡ್ಡಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದ ಘಟನೆ ನಡೆದಿದೆ.
ಘಟನೆಯಲ್ಲಿ ರಾಮು ಎಡಗೆ ಎಂಬಾತನಿಗೆ ಗಾಯಗಳಾಗಿವೆ. ಎಮ್ಮೆ ಮೇಯಿಸಲು ಹೋಗಿದ್ದ ವೇಳೆ ಕರಡಿ ಏಕಾಏಕಿ ದಾಳಿ ಮಾಡಿದ್ದು, ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ.
ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ಮೇಲೆ ನಡೆದ ಕರಡಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.