ಬಸಾಪುರ (ಹಾವೇರಿ): ಪಾದಚಾರಿ ಮೇಲೆ ಲಾರಿ ಹರಿದು ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರದಲ್ಲಿ ನಡೆದಿದೆ.
ಮೃತ ಪಾದಚಾರಿಯನ್ನು 23 ವರ್ಷದ ಶಾಂತಪ್ಪ ಭಜಂತ್ರಿ ಎಂದು ಗುರುತಿಸಲಾಗಿದೆ. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.