ಹಾವೇರಿ : ಸುತ್ತಿಗೆಯಿಂದ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48 ನಾಗನೂರು ಕ್ರಾಸ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದ ಮಹಾದೇವಪ್ಪ ಕುರುವತ್ತಿ(56) ಎಂದು ಗುರುತಿಸಲಾಗಿದೆ.
ಹಾವೇರಿ ಸಮೀಪದ ನಾಗನೂರು ಕ್ರಾಸ್ ಸರ್ವಿಸ್ ರಸ್ತೆಯಲ್ಲಿ ಮಹಾದೇವಪ್ಪ ಅವರ ಶವ ಪತ್ತೆಯಾಗಿದೆ. ಮಹಾದೇವಪ್ಪ ಅವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕೊಲೆಯಾದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಸುತ್ತಿಗೆಯೊಂದು ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಮೃತ ಮಹಾದೇವಪ್ಪ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ : ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವು: ಅತ್ಯಾಚಾರ, ಕೊಲೆ ಶಂಕೆ