ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕನನ್ನ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮತ್ತಿಕೇರಿಯ 56 ವರ್ಷದ ಜಿಎಂ ಸಂಗನಗೌಡ ಎಂದು ಗುರುತಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಸಂಗನಗೌಡ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಸಂಗನಗೌಡರಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಶಿಕ್ಷಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಂಗನಗೌಡರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿಯೇ ಅವರ ಮೃತದೇವವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ. ಈ ಘಟನೆ ಹಾವೇರಿ ಶಹರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಓದಿ: ಕನ್ನಡಕ್ಕೆ ಆಪತ್ತು ತರುವ ಶಕ್ತಿ ವಿಶ್ವದಲ್ಲೇ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಬಸವರಾಜ್ ಬೊಮ್ಮಾಯಿ ಸ್ಪಷ್ಟ ನುಡಿ