ಹಾನಗಲ್ : ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸುರಳೇಶ್ವರ ಗ್ರಾಮದ ಕೆರೆಯಲ್ಲಿ ನಡೆದಿದೆ.
ರಿಯಾಜ್ ಮುಲ್ಲಾ (28) ಮೃತ ಯುವಕ. ಇವರು ಶಾಂತಿನಗರದ ನಿವಾಸಿಯಾಗಿದ್ದು, ಕೆರೆಯ ಬಳಿಯಿದ್ದ ಹೂವು ಕೀಳಲು ಹೋಗಿದ್ದಾಗ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.