ಹಾವೇರಿ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸ್ಡಿಸಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ರೈತ ಕಲವೀರಗೌಡ ಪಾಟೀಲ್ ಎಂಬಾತನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಎಸ್ಡಿಸಿ ಪರಶುರಾಮ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈತ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಐದು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಹಿನ್ನೆಲೆ ಇಂದು ಮೂರು ಸಾವಿರ ರೂಪಾಯಿ ತಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಎಸಿಬಿ ಡಿವೈಎಸ್ಪಿ ಸೋಮಲಿಂಗಪ್ಪ ಕುಂಬಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.