ಹಾವೇರಿ: ಅಕ್ರಮ ಆಸ್ತಿಗಳಿಕೆ ಆರೋಪ ಸಂಬಂಧ ಇಂದು ಬೆಳ್ಳಂಬೆಳ್ಳಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ 75 ಕಡೆಗಳಲ್ಲಿ 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಹಾವೇರಿಯಲ್ಲಿ ಎಸಿಬಿ ಅಧಿಕಾರಿಗಳು ಅಸಿಸ್ಟೆಂಟ್ ಇಂಜಿನಿಯರ್ ಕೃಷ್ಣನ್ ಆರೇರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ನಗರದ ಬಸವೇಶ್ವರ ನಗರದ ಕೃಷ್ಣನ್ ಅವರ ನಿವಾಸ, ಡೊಳ್ಳೇಶ್ವರ ಗ್ರಾಮದ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದ 75 ಕಡೆ ಎಸಿಬಿ ದಾಳಿ.. 18 ಸರ್ಕಾರಿ ಅಧಿಕಾರಿಗಳ ದಾಖಲೆ ಪರಿಶೀಲಿಸುತ್ತಿರುವ ACB ಸಿಬ್ಬಂದಿ!
ಕೃಷ್ಣನ್ ಆರೇರ ಕಳೆದ ಆರು ವರ್ಷಗಳಿಂದ ಹಾವೇರಿ ಎಪಿಎಂಸಿಯಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.