ಹಾವೇರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾನಗಲ್ ತಾಲೂಕಿನ ಹುಣಸೀಕಟ್ಟಿ ಕ್ರಾಸ್ ಬಳಿ ನಡೆದಿದೆ. ಚೇತನ ಈಳಿಗೇರ (32 ವರ್ಷ) ಮತ್ತು ಸುರೇಶ ಚಕ್ರಸಾಲಿ (33 ವರ್ಷ) ಮೃತ ಬೈಕ್ ಸವಾರರು ಎಂದು ತಿಳಿದು ಬಂದಿದೆ.
ಬೈಕ್ ಸವಾರರು ಹಾನಗಲ್ನಿಂದ ಬೆಳಗಾಲಪೇಟೆ ಗ್ರಾಮದತ್ತ ತೆರಳುತ್ತಿದ್ದಾಗ ಗೋಕಾಕದಿಂದ ಹಾನಗಲ್ ಪಟ್ಟಣದತ್ತ ಬರುತ್ತಿದ್ದ ಸಾರಿಗೆ ಬಸ್ ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓರ್ವ ಬೈಕ್ ಸವಾರನ ದೇಹ ಅಪ್ಪಚ್ಚಿಯಾದರೆ ಮತ್ತೊಬ್ಬನಿಗೆ ತೀವ್ರ ಪೆಟ್ಟು ಬಿದ್ದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ಪೊಲೀಸ್ ಠಾಣಾದ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿತು. ಇದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.