ರಾಣೆಬೆನ್ನೂರು: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮಹಿಳೆಯ ದೇಹ ಛಿದ್ರವಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಬಳಿ ನಡೆದಿದೆ.
ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಗಂಗವ್ವ ಚಿಕಪ್ಪ ಸಂಶಿ (40) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಗಂಗವ್ವ ಮತ್ತು ಆಕೆಯ ಮಗ ರಾಣೆಬೆನ್ನೂರು ನಗರಕ್ಕೆ ಸಂತೆಗೆ ತೆರಳಿದ್ದರು ಎನ್ನಲಾಗಿದೆ. ಗ್ರಾಮಕ್ಕೆ ವಾಪಸ್ ಬರುವಾಗ ಎದುರಿಗೆ ಲಾರಿ ಬಂದು ಡಿಕ್ಕಿಯಾಗಿದೆ. ಇದರಿಂದ ಲಾರಿ ಕೆಳಗೆ ಬಿದ್ದ ಗಂಗವ್ವನ ಮೇಲೆ ಚಕ್ರ ಹರಿದಿದ್ದು, ದೇಹ ಛಿದ್ರ ಛಿದ್ರವಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.