ಹಾವೇರಿ: ನಕಲಿ ಮೆಕ್ಕೆಜೋಳದ ಬಿತ್ತನೆ ಬೀಜ ಸಂಗ್ರಹಿಸಿಟ್ಟಿದ್ದ ಕೋಲ್ಡ್ ಸ್ಟೋರೇಜ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನವಲೆ ಪುಂಡಲೀಕಪ್ಪ ಕೋಲ್ಡ್ ಸ್ಟೋರೇಜ್ನಲ್ಲಿ ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಒಂದೂವರೆ ಸಾವಿರ ಕ್ವಿಂಟಾಲ್ ಮೆಕ್ಕೆಜೋಳದ ನಕಲಿ ಬಿತ್ತನೆ ಬೀಜ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಹಾಗೂ ಸಿಪಿಐ ಭಾಗ್ಯವಂತಿ ನೇತೃತ್ವದ ತಂಡ ನಕಲಿ ಬಿತ್ತನೆ ಬೀಜವನ್ನು ವಶಪಡಿಸಿಕೊಂಡಿದ್ದಾರೆ.
ನಿನ್ನೆ ಕೂಡ ಕೃಷಿ ಇಲಾಖೆ ಅಧಿಕಾರಿಗಳು ಪಟ್ಟಣದ ವಿವಿಧ ಕೋಲ್ಡ್ ಸ್ಟೋರೇಜ್ಗಳಲ್ಲಿ ಸಂಗ್ರಹಿಸಿಟ್ಟಿದ್ದ ಆರು ಕೋಟಿ ರೂಪಾಯಿ ಮೌಲ್ಯದ ಆರು ಸಾವಿರ ಕ್ವಿಂಟಾಲ್ ಮೆಕ್ಕೆಜೋಳದ ನಕಲಿ ಬಿತ್ತನೆ ಬೀಜ ವಶಪಡಿಸಿಕೊಂಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.