ಹಾಸನ: ಇಂದು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏಡ್ಸ್ ಜಾಗೃತಿ ಜಾಥಾ ನಡೆಸಲಾಯಿತು.
ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಾಸನ ವೈದ್ಯಕೀಯ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಏಡ್ಸ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಚರ್ಮವಾದ್ಯ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಈ ಜಾಥಾದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್, ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಈಶ್ವರ್ ಪ್ರಸಾದ್, ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಹಾಗೂ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಆರಾಧ್ಯ, ಲಯನ್ಸ್ ಸೇವಾಸಂಸ್ಥೆ (ಕ್ಲಬ್) ಅಧ್ಯಕ್ಷ ಹೆಚ್.ಆರ್. ಚಂದ್ರೇಗೌಡ, ಕಾರ್ಯದರ್ಶಿ ಎಸ್.ಪಿ. ಪ್ರಕಾಶ್, ಖಜಾಂಚಿ ಹೆಚ್.ಟಿ. ಸುರೇಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.