ಹಾನಗಲ್: ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಅಕ್ಕಿಆಲೂರು ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕೆಲ ಜನರು ನೆಲದಲ್ಲಿ ಬಾಕ್ಸ್ಗಳನ್ನ ಹಾಕಿ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಮಾಲೆಗಳನ್ನ ಹಾಕಿ ಗೌರವ ಸಲ್ಲಿಸಿದರು. ಈ ರೀತಿ ಅಂತರ ಕಾಯ್ದುಕೊಂಡು ಅಂಬೇಡ್ಕರ್ ಜಯಂತಿ ಆಚರಿಸಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.