ಹಾವೇರಿ : ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟುಕರಕಲಾದ ಘಟನೆ ಹಾವೇರಿ ಸಮೀಪದ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಶೆಟ್ಟರ್ ಎಂಬ ರೈತ ಆರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಶಿ ಮಾಡಿದ್ದರು. ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲಿ ಮೆಕ್ಕೆಜೋಳದ ತೆನೆಗಳು ಬೆಂಕಿಗಾಹುತಿಯಾಗಿದ್ದವು. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನು ಓದಿ :ನಿಷೇಧವಿದ್ದರೂ ಗುರುಗುಂಟಾ ಅಮರೇಶ್ವರ ಕಾರ್ತಿಕೋತ್ಸವದಲ್ಲಿ ಭಕ್ತರು ಭಾಗಿ!