ಹಾವೇರಿ: ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಬೇಕಾದ ಆಹಾರ ಪದಾರ್ಥಗಳನ್ನು ಅಂಗನವಾಡಿ ಸಿಬ್ಬಂದಿಯೋರ್ವರು ಮನೆಗೆ ತೆಗೆದುಕೊಂಡು ಹೋಗುವ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಗಡಿಯಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗಿರಿಜಮ್ಮ ಎನ್ನುವವರು ಅಂಗನವಾಡಿ ಮಕ್ಕಳಿಗೆ ಕೊಡಬೇಕಾದ ಅಕ್ಕಿ, ಬೆಲ್ಲ, ಶೇಂಗಾ ಕಾಳು ಮತ್ತು ಸಕ್ಕರೆಯನ್ನ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾಮಸ್ಥರು ಅದಕ್ಕೆ ತಡೆ ಒಡ್ಡಿದ್ದಾರೆ.
ಆಗ ಸಿಬ್ಬಂದಿ ಗಿರಿಜಮ್ಮ ಮತ್ತು ಗ್ರಾಮಸ್ಥರ ಜೊತೆ ಮಾತಿನ ಚಕಮಕಿ ನಡೆದು ಗಿರಿಜಮ್ಮ ಆಹಾರ ಪದಾರ್ಥಗಳನ್ನ ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ ಸಿಬ್ಬಂದಿ ಗಿರಿಜಮ್ಮ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.