ಹಾವೇರಿ: ಶ್ರೀಗಂಧದ ಮರಗಳನ್ನ ಕಡಿದು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಹಾವೇರಿ ಜಿಲ್ಲೆ ಹಾನಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೂರು ಗ್ರಾಮದ ಸಿಕಂದರ್ (30) ಮತ್ತು ಖಲೀಮುಲ್ಲಾ (28) ಬಂಧಿತ ಆರೋಪಿಗಳು. ಬಂಧಿತರಿಂದ ಐವತ್ತು ಸಾವಿರ ರುಪಾಯಿ ಮೌಲ್ಯದ 16 ಶ್ರೀಗಂಧದ ತುಂಡುಗಳು ಹಾಗೂ ಎರಡು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಶಿರಸಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನ ಕಡಿದು ತಂದು ಸಾಗಣೆ ಮಾಡ್ತಿದ್ದರು ಎನ್ನಲಾಗಿದೆ. ಈ ಕುರಿತಂತೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.