ರಾಣೆಬೆನ್ನೂರು: ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ಕೊಡುವುದು ಬಿಜೆಪಿ ಹೈಕಮಾಂಡ್ಗೆ ಬಿಟ್ಟ ವಿಚಾರ. ಇದರ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ ಎಂದು ರಾಣೆಬೆನ್ನೂರು ಕ್ಷೇತ್ರದ ಶಾಸಕ ಅರುಣ್ ಕುಮಾರ್ ಪೂಜಾರ್ ಹೇಳಿದರು.
ನಗರದಲ್ಲಿ ಶಾಸಕರ ನೂತನ ಕೊಠಡಿ ಉದ್ಘಾಟನೆ ಮಾಡಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಆರ್.ಶಂಕರ್ಗೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಆಶಯ. ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಸಹ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ಕೊಡುವ ಆಶ್ವಾಸನೆ ನೀಡಿದ್ದಾರೆ. ಅವರು ದೇವರ ಇಚ್ಛೆಯಿಂದ ಸಚಿವರಾದ್ರೆ ನಮ್ಮ ಕ್ಷೇತ್ರ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿದೆ ಎಂದರು.
ಇನ್ನು ಆರ್.ಶಂಕರ್ಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಬಿಜೆಪಿ ಹಿರಿಯ ನಾಯಕರಿಗೆ ಬಿಟ್ಟ ವಿಚಾರ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ ಎಂದರು.