ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದರು.
ನಗರದ ಮೈಲಾರ ಮಹದೇವ ವೃತ್ತದಲ್ಲಿ ಸೇರಿದ ಕಾರ್ಯಕರ್ತೆಯರು, ತಮ್ಮ ಖಾತೆಗಳಿರುವ ಪಾಸ್ಬುಕ್ಗಳನ್ನು ಗುಡ್ಡೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಮಗೆ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.
12 ಸಾವಿರ ರೂ ಮಾಸಾಶನ, ಕೊರೊನಾ ಹಿನ್ನೆಲೆಯಲ್ಲಿ ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ಪೂರೈಸುವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು.
ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರ ಈ ಕೂಡಲೇ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.