ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮೈಲಾರ ಮಹದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ರಪಡಿಸಿ, ಸರ್ಕಾರ ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನವನ್ನು ಪಾವತಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ತಮಗೆ ಖಾಯಂ ವೇತನ ನೀಡಬೇಕು. ನಮ್ಮನ್ನ ಸಹ ಕಾರ್ಮಿಕರಂತೆ ನೋಡಿಕೊಳ್ಳಬೇಕು. ಸರ್ಕಾರ ಪ್ರೋತ್ಸಾಹಧನ ಪಾವತಿಸುವರೆಗೂ ಕೆಲಸ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.