ಹಾವೇರಿ: ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಟ್ಟೀಹಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಓರ್ವ ಆರ್ಎಸ್ಎಸ್ ಕಾರ್ಯಕರ್ತನ ತಲೆಗೆ ಏಟು ಬಿದ್ದಿದೆ. ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಮಂಗಳವಾರ ರಾತ್ರಿ ಪಟ್ಟಣದಲ್ಲಿ ಘಟನೆ ನಡೆದಿದೆ.
ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಹಲ್ಲೆ ಮಾಡಲಾಗಿದೆ. ಪಟ್ಟಣದಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗಕ್ಕೆ ಬಂದಿದ್ದ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.
ಗಲಾಟೆಯ ವಿಡಿಯೋ ಇದೀಗ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ಯಕೋಮಿನ 10 ಜನರನ್ನು ಬಂಧಿಸಿದ್ದೇವೆ ಎಂದು ಹಾವೇರಿ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪಟ್ಟಣದಲ್ಲಿ ಪರಿಸ್ಥಿತಿ ಶಾಂತ ಸ್ಥಿತಿಯಲ್ಲಿ ಇದೆ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬಾಗಲಕೋಟೆಯಲ್ಲಿ ಆರ್ಎಸ್ಎಸ್ ಪಥಸಂಚಲನ : ಗಮನ ಸೆಳೆದ ಗಣವೇಷಧಾರಿಗಳು