ಹಾವೇರಿ: ಹಿರೇಕೆರೂರು ಕ್ಷೇತ್ರದಲ್ಲಿ ಉಪಚುನಾವಣೆ ಅಖಾಡ ರಂಗು ಪಡೆದಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡನ ಫಾರ್ಮ್ಹೌಸ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸ್ ಬಿ ತಿಪ್ಪಣ್ಣವರ ಎಂಬುವರ ಫಾರ್ಮಹೌಸ್ ಮೇಲೆ ಈ ದಾಳಿ ನಡೆದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿ ಏನೂ ಸಿಗದ ಕಾರಣ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. ಈ ಸಮಯದಲ್ಲಿ ಕಾಂಗ್ರೆಸ್ನವರನ್ನ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದೀರಿ ಎಂದು ಅಬಕಾರಿ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎಂಬ ದೂರಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ಫಾರ್ಮಹೌಸ್ ಪರಿಶೀಲನೆ ನಡೆಸಲಾಗಿದೆ.