ರಾಣೆಬೆನ್ನೂರು: ಕೊರೊನಾ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ರಾಣೆಬೆನ್ನೂರು ಶಾಸಕ ಅರುಣಕುಮಾರ ಪೂಜಾರ ಹಳ್ಳಿಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ತಾಲೂಕಿನ ಮೈದೂರು, ಗಂಗಾಪುರ, ಗುಡಗೂರ ಗ್ರಾಮಗಳಿಗೆ ತಮ್ಮ ಬೆಂಬಲಿಗರೊಂದಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೊರೊನಾ ವೈರಸ್ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತಗೆದುಕೊಂಡಿದೆ ಎಂದರು.
ಸಾರ್ವಜನಿಕರ ಅನುಕೂಲಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಕೂಡ ಮಾಡಲಾಗಿದ್ದು, ದಯವಿಟ್ಟು ಸಾರ್ವಜನಿಕರು ಮನೆಯಿಂದ ಹೊರಗಡೆ ಬರಬಾರದು. ಇದಕ್ಕೆ ನಾವೆಲ್ಲರೂ ಕೈಜೋಡಿಸುವ ಮೂಲಕ ಕೊರೊನಾ ವೈರಸ್ ತಡೆಗಟ್ಟೋಣ ಎಂದರು.