ರಾಣೆಬೆನ್ನೂರು: ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಪರ ಆರೋಗ್ಯ ಸಚಿವ ಶ್ರೀರಾಮುಲು ಕ್ಷೇತ್ರದ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು.
ಗ್ರಾಮದ ಬಲಮುರಿ ಗಣೇಶ ದೇವಸ್ಥಾನದಿಂದ ರೋಡ್ ಶೋ ಆರಂಭಿಸಿದ ಶ್ರೀರಾಮುಲು ಗ್ರಾಮದ ವಿವಿಧ ಬಡಾವಣೆಯಲ್ಲಿ ಮತಯಾಚಿಸಿದರು.
ರೋಡ್ ಶೋನಲ್ಲಿ ಶಾಸಕ ರೇಣುಕಾಚಾರ್ಯ, ಮಾಜಿ ಸಚಿವ ಆರ್.ಶಂಕರ, ಭಾರತಿ ಅಳವಂಡಿ ಸೇರಿದಂತೆ ನೂರಾರು ಕಾರ್ಯಕರ್ತರ ಭಾಗವಹಿಸಿದ್ದರು.