ETV Bharat / state

ಹಾವೇರಿ: ಎತ್ತುಗಳ ಮೆರವಣಿಗೆ ವೇಳೆ ಚಪ್ಪಲಿ ತೂರಿ ವಿಕೃತಿ; ಯುವಕನಿಗೆ ಥಳಿತ - haveri latest crime news

ಬಸವ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ನಡೆಸಲಾಗುತ್ತಿತ್ತು. ಈ ವೇಳೆ ಆರೋಪಿ ಎತ್ತುಗಳ ಮೇಲೆ ಚಪ್ಪಲಿ ತೂರಿದ್ದಕ್ಕೆ ಥಳಿಸಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

haveri
ಹಾವೇರಿ
author img

By

Published : May 4, 2022, 10:45 AM IST

ಹಾವೇರಿ: ಬಸವ ಜಯಂತಿ ಪ್ರಯುಕ್ತ ನಡೆದ ಎತ್ತುಗಳ ಮೆರವಣಿಗೆ ವೇಳೆ ಯುವಕನೋರ್ವ ಎತ್ತುಗಳ ಮೇಲೆ ಚಪ್ಪಲಿ ತೂರಿ ಶಾಂತಿ ಕದಡಲು ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಾರಡಗಿ ಗ್ರಾಮದಲ್ಲಿ ನಡೆಯಿತು. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಯುವಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಖಾಜಾಮುದ್ದೀನ್ ಕೋಲ್ಕಾರ(29) ಎಂದು ಗುರುತಿಸಲಾಗಿದೆ.

haveri
ಖಾಜಾಮುದ್ದೀನ್ ಕೋಲ್ಕಾರ- ಆರೋಪಿ

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದರು. ಜನರ ಥಳಿತಕ್ಕೊಳಗಾದ ಆರೋಪಿಯ ಗಾಯವಾಗಿದ್ದು, ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಸಂಭ್ರಮದ ರಂಜಾನ್, ಬಸವ ಜಯಂತಿ ಆಚರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.