ರಾಣೇಬೆನ್ನೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ನಗರದಲ್ಲಿ ಸುಮಾರು 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ನೂತನ ಕಟ್ಟಡಗಳನ್ನು ಉದ್ಘಾಟನೆ ಮಾಡಿದರು.
ಲೋಕೋಪಯೋಗಿ ಇಲಾಖೆಯ ವತಿಯಿಂದ ಬಾಗಲಕೋಟೆ-ಬಿಳಿಗಿರಿರಂಗನಬೆಟ್ಟದ ರಾಜ್ಯ ಹೆದ್ದಾರಿ-57 ರಸ್ತೆಯ ಸುಧಾರಣೆ ಕಾಮಗಾರಿ ಭೂಮಿ ಪೂಜೆ ಹಾಗೂ ಹರಳಯ್ಯ ನಗರದಲ್ಲಿ ನಗರಸಭೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಣೇಬೆನ್ನೂರು ಕರ್ನಾಟಕದ ಮಧ್ಯ ಭಾಗದಲ್ಲಿರುವ ಕಾರಣ ಇಲ್ಲಿ ವಾಣಿಜ್ಯೋದ್ಯಮಕ್ಕೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಮಾಡಲಾಗುವುದು. ಇಲ್ಲಿ ಎಲ್ಲಾ ರೀತಿಯ ಸೌಲಭ್ಯವಿರುವ ಕಾರಣ ಇಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವ ಮೂಲಕ ಇಲ್ಲಿನ ಯುವಕರಿಗೆ ಉದ್ಯೋಗಗಳನ್ನು ನೀಡುವ ಕೆಲಸವನ್ನು ಮಾಡುತ್ತವೆ. ಈಗಾಗಲೇ ಜಗದೀಶ್ ಶೆಟ್ಟರ್ ಜೊತೆ ಸಮಾಲೋಚನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರುವಲ್ಲಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಶಾಸಕ ಅರುಣ್ ಕುಮಾರ್, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ್ ಪೂಜಾರ, ನಿಂಗರಾಜ ಮೊದಲಾದವರು ಹಾಜರಿದ್ದರು.