ಹಾವೇರಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಆಯ್ಕೆಯಾಗುತ್ತಿದ್ದಂತೆ ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮ ಮನೆಮಾಡಿದೆ.
ಬಸವರಾಜ್ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವ ಮತ್ತು ಸವಣೂರಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿ.ಎಸ್.ಯಡಿಯೂರಪ್ಪಗೆ ಜೈಕಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಸವರಾಜ್ ಬೊಮ್ಮಾಯಿ ನಮ್ಮ ರಾಜಾಹುಲಿ ಎಂದು ಅಭಿಮಾನಿಗಳು ಕೇಕೆ ಹಾಕುತ್ತಿದ್ದ ದೃಶ್ಯ ಕಂಡುಬಂದಿತು.