ಹಾವೇರಿ : ಸಿಎಂ ಯಡಿಯೂರಪ್ಪ ಮುಂದಿನ ಸಂಪೂರ್ಣ ಅವಧಿಗೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ವಿಧಾನಸಭೆಯ ಚುನಾವಣಾ ನೇತೃತ್ವವನ್ನ ಬಿ ಎಸ್ ಯಡಿಯೂರಪ್ಪವಹಿಸಿದ್ದರು. ವಿಧಾನಸಭೆಯ ಮುಂದಿನ ಚುನಾವಣೆ ಸಹ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬೊಮ್ಮಾಯಿ ತಿಳಿಸಿದರು.
ಶಿರಾ ಮತ್ತು ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬೊಮ್ಮಾಯಿ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ನಡೆಸಲು ಸ್ವಲ್ಪ ತೊಂದರೆಯಾಗಿದೆ.
ಆಯೋಜನೆ ಕುರಿತಂತೆ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು. ಕೊರೊನಾ ಇಳಿಮುಖವಾಗುತ್ತಿದ್ದಂತೆ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಇಂಗಿತನ್ನ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.