ಹಾವೇರಿ: ಪಿಎಫ್ಐ ಸಂಘಟನೆಗೆ ವಿದೇಶದಿಂದ ಹಣ ಬರುವ ಕುರಿತಂತೆ ತನಿಖೆ ನಡೆಸುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವನಾಗಿ ಏನು ಕ್ರಮಕೈಗೊಳ್ಳಬೇಕು ಆ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸಂಶಯ ಕಂಡುಬಂದರೂ ಅದನ್ನು ತನಿಖೆ ಮಾಡಿಸಲಾಗುವುದು. ಘಟನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇಂಟರ್ನೆಟ್, ಬ್ಯಾಂಕ್ ಅಕೌಂಟ್ ಎಲ್ಲವನ್ನು ತನಿಖೆ ಮಾಡುತ್ತೇವೆ. ಕಾನೂನು ಬದ್ದ ಇಲ್ಲದಿದ್ದರೆ ಕಾನೂನುಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ತಿಳಿಸಿದರು.