ಹಾವೇರಿ: ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ತಾಲೂಕಿನ ಹನುಮರಹಳ್ಳಿ, ವನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಯಿತು.
ಹನುಮರಹಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಅಭಿವೃದ್ದಿಯ ಕಾರ್ಯಗಳನ್ನಿಟ್ಟುಕೊಂಡು ಚುನಾವಣೆ ಎದುರಿಸಿದರೆ, ಕಾಂಗ್ರೆಸ ಪಕ್ಷ ಸಮಾಜ ಒಡೆದು ಮತವನ್ನು ಪಡೆದುಕೊಳ್ಳಲು ಹುನ್ನಾರ ನಡೆಸಿದೆ ಎಂದು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ಕೊಟ್ಟಿದ್ದರಿಂದ ರಾಜ್ಯದ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ಉಚಿತವಾಗಿ ಹಂಚಲಾಯಿತು. ಇಂದು ಅದರ ಫಲವಾಗಿ ಕೊರೊನಾ ಮುಕ್ತ ರಾಜ್ಯವಾಗುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ನಾವು ಕೇವಲ ಅಭಿವೃದ್ಧಿ ಮಾಡದೆ, ಕೆಲವು ಸಂಕಷ್ಟದ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದ್ದೇವೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದ ಜನರು ಅಧಿಕ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಸಿಎಂ ರೋಡ್ ಶೋ ವೇಳೆ ಬಿಜೆಪಿಯ ಸ್ಥಳೀಯ ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ:ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲು, ಕನಕಪುರದಲ್ಲಿ ಡಿಕೆಶಿಗೆ ಟೆನ್ಷನ್: ನಳಿನ್ ಕುಮಾರ್ ಕಟೀಲ್