ETV Bharat / state

ಹಾವೇರಿ ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿ ಆಚರಣೆ - ಬಸವೇಶ್ವರ ಜಯಂತಿಯ ಆಚರಣೆ

ಬಸವ ಜಯಂತಿ ನಿಮಿತ್ತ ಹಾವೇರಿ ಜಿಲ್ಲೆಯಲ್ಲಿ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಮತ್ತು ಸಾಮೂಹಿಕ ವಿವಾಹಗಳನ್ನು ಆಯೋಜಿಸಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ನಗರದ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

Basaveshwara Jayanti Celebration by Haveri District
ಹಾವೇರಿ ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿಯ ಆಚರಣೆ
author img

By

Published : May 3, 2022, 10:16 PM IST

ಹಾವೇರಿ: ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಬಸವ ಜಯಂತಿ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಬಸವ ಜಯಂತಿ ನಿಮಿತ್ತ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಮತ್ತು ಸಾಮೂಹಿಕ ವಿವಾಹಗಳು ಆಯೋಜಿಸಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ನಗರದ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ಹುಕ್ಕೇರಿಮಠದಲ್ಲಿ ನಡೆದ ಕಾರ್ಯಕ್ರಮಕ್ಕೆ ಸದಾಶಿವಶ್ರೀಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಮಾರು 16 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ನವಜೀವನಕ್ಕೆ ಕಾಲಿಟ್ಟರು. ನೂತನ ದಂಪತಿಗಳಿಗೆ ಆಶೀರ್ವಾದ ಮಾಡಿದ ಸದಾಶಿವಶ್ರೀಗಳು ಬಸವೇಶ್ವರರ ಕಾಯಕ ಮತ್ತು ದಾಸೋಹ ಪರಂಪರೆ ಪಾಲನೆ ಮಾಡುವಂತೆ ನವಜೋಡಿಗಳಿಗೆ ತಿಳಿಸಿದರು.

ಬಸವ ಜಯಂತಿ ಅಂಗವಾಗಿ ಸಂಜೆ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಭಾವಚಿತ್ರದ ಮೆರವಣಿಗಿಗೆ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಹುಕ್ಕೇರಿಮಠದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗಿಗೆ ಪುರವಂತಿಕೆ ಕಲಾಮೇಳ ಮತ್ತಷ್ಟು ಮೆರಗು ನೀಡಿತು.

ಇದನ್ನೂ ಓದಿ: ಭಾರತಕ್ಕೆ ಭೇಟಿ ನೀಡಲು ಐವರಿಗೆ ಸ್ಪೂರ್ತಿಯಾಗಿ: ಡೆನ್ಮಾರ್ಕ್​​​ನ ಭಾರತೀಯರಿಗೆ ಮೋದಿ ಕರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.