ಹಾವೇರಿ: ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆ ಕಾಪಾಡೋದ್ರಲ್ಲಿ ನಿರತರಾಗಿದ್ದಾರೆ. ಆದ್ದರಿಂದ ದೆಹಲಿಗೆ ಹೋಗೋದು ವಿಳಂಬ ಆಗಿದೆ. ಅವರು ದೆಹಲಿಗೆ ಹೋಗಿ ಬಂದ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿ, ಮಂಗಳೂರು ಗಲಭೆಯ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಖಂಡಿಸಿದರು. ಸಿದ್ದರಾಮಯ್ಯ ಸಿಎಂ ಆಗಿದ್ದವರು, ದುಷ್ಕರ್ಮಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡುವಾಗ ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.
ಅಲ್ಲದೆ ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವರು ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.