ಹಾವೇರಿ: ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಗೆ ಇಂದು ಬಿ.ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆ ನಡೆಸಿದರು. ಹಿರೇಕೆರೂರು ಶಂಕರ್ ವೃತ್ತದಿಂದ ತೆರೆದ ವಾಹನದಲ್ಲಿ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಕೇಸರಿ ಧ್ವಜಗಳು, ಪ್ರಧಾನಿ ನರೇಂದ್ರ ಮೋದಿ ಮುಖವಾಡಗಳನ್ನ ಹಿಡಿಯುವ ಮೂಲಕ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಬಿ. ಬಣಕಾರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.