ETV Bharat / state

ದಿನೇಶ್​​​ ಗುಂಡೂರಾವ್​​​​​​, ಸಿದ್ದರಾಮಯ್ಯ ರಾಜೀನಾಮೆ ಸ್ವಾಗತಾರ್ಹ: ಬಿ.ಸಿ.ಪಾಟೀಲ್​​​ ವ್ಯಂಗ್ಯ - ಹಿರೇಕೆರೂರಲ್ಲಿ ಶಾಸಕ ಬಿ.ಸಿ.ಪಾಟೀಲ್ ಹೇಳಿಕೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಡಿಸೆಂಬರ್ 9ರಂದು ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುತ್ತಿದ್ದರು. ಆದರೆ ಈಗ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

BC Patil celebration in Haveri, ಹಿರೇಕೆರೂರಲ್ಲಿ ಶಾಸಕ ಬಿ.ಸಿ.ಪಾಟೀಲ್ ಹೇಳಿಕೆ
ಶಾಸಕ ಬಿ.ಸಿ.ಪಾಟೀಲ್ ವ್ಯಂಗ್ಯ
author img

By

Published : Dec 10, 2019, 12:28 PM IST

ಹಾವೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಡಿಸೆಂಬರ್ 9ರಂದು ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುತ್ತಿದ್ದರು. ಆದರೆ ಈಗ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಅಭಿಮಾನಿಗಳೊಂದಿಗೆ ಬಿ.ಸಿ.ಪಾಟೀಲ್ ಸಂಭ್ರಮಾಚರಣೆ

ಹಿರೇಕೆರೂರಿನಲ್ಲಿ ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಹಂಚಿಕೊಂಡ ಬಳಿಕ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ಇದಕ್ಕಾಗಿಯೇ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಡಿಸೆಂಬರ್ 9ರ ನಂತರ ಸಿಹಿ ಸುದ್ದಿ ಅಂತಾ ಹೇಳಿರಬೇಕು ಎಂದು ವ್ಯಂಗ್ಯವಾಡಿದರು.

ತಮಗೆ ಸಚಿವ ಸ್ಥಾನ ಸಿಗುವುದು ಪಕ್ಕಾ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಹೈಕಮಾಂಡ್​ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ನಾಳೆ ಬೆಂಗಳೂರಿಗೆ ತೆರಳಲಿದ್ದು, ಅಲ್ಲಿ ಎಲ್ಲರೂ ಕುಳಿತು ಈ ಕುರಿತಂತೆ ಮಾತನಾಡುವುದಾಗಿ ತಿಳಿಸಿದರು.

Intro:KN_HVR_01_BCP_RESIGHN_SCRIPT_7202143
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೇ 9 ರಂದು ಯಡಿಯೂರಪ್ಪ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುತ್ತಿದ್ದರು. ಇದೀಗ ಅವರೆ ಪ್ರತಿಪಕ್ಷನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಕುಟುಕಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿದ ಅವರು ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ಸಿದ್ದರಾಮಯ್ಯ ಪ್ರತಿಪಕ್ಷನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು. ಇದಕ್ಕಾಗಿಯೇ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ 9 ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ವ್ಯಂಗ್ಯವಾಡಿದರು. ತಮಗೆ ಸಚಿವ ಸ್ಥಾನ ಸಿಗುವುದು ಪಕ್ಕಾ ಈ ಕುರಿತಂತೆ ಸಿ.ಎಂ.ಯಡಿಯೂರಪ್ಪ ಹೈಕಮಾಂಡ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಂಗಳೂರಿಗೆ ತೆರಳಲಿದ್ದು ಅಲ್ಲಿ ಎಲ್ಲರು ಕುಳಿತು ಈ ಕುರಿತಂತೆ ಮಾತನಾಡುವುದಾಗಿ ತಿಳಿಸಿದರು.
Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.