ETV Bharat / state

ಹಾನಗಲ್ ಬೈ ಎಲೆಕ್ಷನ್​ನಲ್ಲಿ ಶಿವರಾಜ್ ಸಜ್ಜನರ್ ಗೆಲ್ಲುತ್ತಾರೆ: ಸಿಎಂ ಬೊಮ್ಮಾಯಿ ವಿಶ್ವಾಸ - ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್

ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ವಿರಕ್ತಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹಾನಗಲ್​​ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

CM Bommai
ಸಿಎಂ ಬೊಮ್ಮಾಯಿ
author img

By

Published : Oct 20, 2021, 10:46 PM IST

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಕಳೆದ ಸಲಕ್ಕಿಂತ ಅಧಿಕ ಮತ ಪಡೆದು ಜಯಭೇರಿ ಬಾರಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ

ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ವಿರಕ್ತಮಠಕ್ಕೆ ಭೇಟಿ ನೀಡಿ ಮಠದಲ್ಲಿರುವ ಮಲ್ಲಿಕಾರ್ಜುನಸ್ವಾಮಿ ಗದ್ದುಗೆ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಸಿಎಂ ಮಾತನಾಡಿದರು.

ಕಾಂಗ್ರೆಸ್ ಮತ್ತು ಜೆಡಿಎಸ್​ ಪಕ್ಷದವರಿಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹಾಗಾಗಿ ಆರ್​ಎಸ್ಎಸ್​​ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಪಸಂಖ್ಯಾತ ಮತಗಳ ಓಲೈಕೆ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಇದರಿಂದ ಏನೂ ಆಗುವುದಿಲ್ಲ ಎಂದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡಿರುವ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯೆಸುವುದಿಲ್ಲ. ಈ ರೀತಿಯ ಸಣ್ಣ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ ಎಂದರು. ಹಾನಗಲ್ ಕ್ಷೇತ್ರದಲ್ಲಿ ಗುರುವಾರ ಪ್ರಚಾರ ಕೈಗೊಳ್ಳುವದಾಗಿ ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ತಳವಾರ ಸಮುದಾಯಕ್ಕೆ ST ಜಾತಿ ಪ್ರಮಾಣ ಪತ್ರ: ನಿಯೋಗಕ್ಕೆ ಸಿಎಂ ಭರವಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.