ETV Bharat / state

ಬಿಜೆಪಿ ಶಾಸಕ ಸ್ಥಾನಕ್ಕಿಂದು ನೆಹರು ಓಲೇಕಾರ್​ ರಾಜೀನಾಮೆ: ಜೆಡಿಎಸ್ ಸೇರೋದಾಗಿ ಹೇಳಿಕೆ

ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಅವರು ಇಂದು ಭಾರತೀಯ ಜನತಾ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.

nehru olekar
ನೆಹರು ಓಲೇಕಾರ್
author img

By

Published : Apr 16, 2023, 8:27 AM IST

Updated : Apr 16, 2023, 1:48 PM IST

ಮಾಧ್ಯಮಗಳೊಂದಿಗೆ ಮಾತನಾಡಿದ ನೆಹರು ಓಲೇಕಾರ್

ಹಾವೇರಿ : ಹಾವೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ನೆಹರು ಓಲೇಕಾರ್​ ಅವರು ಇಂದು ಕೇಸರಿ ಪಕ್ಷ ತೊರೆಯಲಿದ್ದಾರೆ. ಈ ಕುರಿತಂತೆ ಶನಿವಾರ ತಡರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಶಿರಸಿಗೆ ತೆರಳಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡುತ್ತೇನೆ. ಅಲ್ಲಿಂದ ಬೆಂಗಳೂರಿಗೆ ತೆರಳಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ನೀಡುತ್ತೇನೆ ಎಂದರು.

ಶನಿವಾರ ನಡೆದ ಬೆಂಬಲಿಗರ ಸಭೆಯಲ್ಲಿ ಈ ತಿರ್ಮಾನಕ್ಕೆ ಬರಲಾಗಿದೆ. ಸಂಜೆ ಜೆಡಿಎಸ್ ಪಕ್ಷದ ಕಚೇರಿಗೆ ತೆರಳಿ ಜೆಡಿಎಸ್ ಪಕ್ಷ ಸೇರುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ನಾನು ಉದ್ದೇಶ ಪೂರ್ವಕವಾಗಿ ಮಾತನಾಡಿಲ್ಲ. ನನ್ನ ಟಿಕೆಟ್ ತಪ್ಪಿಸಲು ಅನೇಕ ಜನ ನನ್ನ ಬಗ್ಗೆ ಮಾತನಾಡಿದ್ದಾರೆ. ಅದೆಲ್ಲವನ್ನು ತಿಳಿದುಕೊಂಡು ನಾನು ಮಾತನಾಡಿದ್ದೇನೆ ಎಂದು ತಿಳಿಸಿದರು. ಹಾವೇರಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಅನ್ನು ನೆಹರು ಓಲೇಕಾರ್ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ಅವರಿಗೆ ನೀಡಲಾಗಿದೆ.

ವಿಡಿಯೋ ಶೇರ್​ ಮಾಡಿ ವಿಷಾದ ವ್ಯಕ್ತಪಡಿಸಿದ ನೆಹರು ಓಲೇಕಾರ್

ಸಿಎಂ ವಿರುದ್ಧ ಬಳಸಿದ ಪದಕ್ಕೆ ಓಲೇಕಾರ್​ ವಿಷಾದ.. ಇನ್ನು ಶನಿವಾರ ಬೆಂಬಲಿಗರ ಸಭೆಯಲ್ಲಿ ಆಡಿದ ಮಾತುಗಳ ಕುರಿತಂತೆ ವಿಡಿಯೋವೊಂದನ್ನು ಶೇರ್ ಮಾಡಿರುವ ನೆಹರು ಓಲೇಕಾರ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಆವೇಷಭರಿತನಾಗಿ ಮಾತನಾಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ, ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ಕೆಲವೊಂದು ಶಬ್ಧ ಉಪಯೋಗಿಸಿದ್ದರ ಬಗ್ಗೆ ಸಹ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಎಲ್ಲಾ ಸಮುದಾಯದ ಬಗ್ಗೆ ನನಗೆ ಅಪಾರವಾದ ಕಾಳಜಿ ಮತ್ತು ಗೌರವ ಇದೆ. ಯಾವುದೇ ಒಂದು ಸಮುದಾಯದ ಜನರ ಮನಸ್ಸಿಗೆ ನೋವು ಉಂಟು ಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಶಾಸಕ ನೆಹರು ಓಲೇಕಾರ್

ಜಗದೀಶ್ ಶೆಟ್ಟರ್ ಕೂಡ ರಾಜೀನಾಮೆ : ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಬಿಜೆಪಿ ಟಿಕೆಟ್ ಕೈ ತಪ್ಪಿರುವ ಕಾರಣ ಪಕ್ಷಕ್ಕೆ ಮತ್ತು ಬಿಜೆಪಿಯ ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುವುದಾಗಿ ನಿರ್ಧಾರ ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿ ಮಾಡಿ, ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್​ನಿಂದ ಆಫರ್​ಗಳ ಸುರಿಮಳೆ : ಕೇಂದ್ರ ಸಚಿವ ಸ್ಥಾನ, ಗವರ್ನರ್ ಹುದ್ದೆ ಬೇಡವೆಂದ ಜಗದೀಶ್ ಶೆಟ್ಟರ್

ವಿಧಾನಸಭಾ ಚುನಾವಣೆ : ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ : ನೆಹರು ಓಲೇಕಾರಗೆ ರಿಲೀಫ್​ ನೀಡಿದ ಹೈಕೋರ್ಟ್ ​​​​: ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ

Last Updated : Apr 16, 2023, 1:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.