ETV Bharat / state

ಎಕ್ಸಿಟ್​ ಪೋಲ್​ ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ: ಸಿಎಂ ಬೊಮ್ಮಾಯಿ - ಈಟಿವಿ ಭಾರತ ಕನ್ನಡ

ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಲಭಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

bjp-will-come-to-power-with-a-clear-majority-says-cm-bommai
ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ : ಸಿಎಂ ಬೊಮ್ಮಾಯಿ ವಿಶ್ವಾಸ
author img

By

Published : May 10, 2023, 10:00 PM IST

Updated : May 10, 2023, 11:03 PM IST

ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ : ಸಿಎಂ ಬೊಮ್ಮಾಯಿ ವಿಶ್ವಾಸ

ಹಾವೇರಿ : ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ಯಾವಾಗಲೂ ಶೇಕಡಾ 100ರಷ್ಟು ನಿಖರವಾಗಿ ಇರುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಶಿಗ್ಗಾಂವಿ ನಗರದ ತಮ್ಮ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಸಮೀಕ್ಷೆಗೆ ಹತ್ತಿರವಾಗಿವೆ. ಇನ್ನು ನಿಜ ಫಲಿತಾಂಶ ಹೊರ ಬೀಳುವಾಗ ಸಮೀಕ್ಷೆಯ ವರದಿಯಲ್ಲಿ ಹೆಚ್ಚು ಕಡಿಮೆ ಆಗುತ್ತದೆ. ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಶೇಕಡಾ ಮತದಾನದಲ್ಲೂ ಏರಿಕೆ ಕಂಡುಬಂದಿದೆ. ಗ್ರಾಮೀಣ ಭಾಗದಲ್ಲಿ ಯಾರು ಮತದಾನ ಮಾಡುತ್ತಿರಲಿಲ್ಲವೋ ಅವರೆಲ್ಲ ಬಂದು ಮತದಾನ ಮಾಡಿದ್ದಾರೆ. ಇದರಿಂದ ಬಿಜೆಪಿ ಅನುಕೂಲವಾಗಲಿದೆ ಎಂದು ಹೇಳಿದರು.

ನಾವೇ ಸರ್ಕಾರ ರಚಿಸುತ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ನಮ್ಮ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸ ಇದೆ. ಮೇ 13ರ ಫಲಿತಾಂಶ ಬರುವ ತನಕ ಕಾದು ನೋಡಿ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ : ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇಕಡಾವಾರು 54.53 ರಷ್ಟು ಮತದಾನ

ಚುನಾವಣೋತ್ತರ ಸಮೀಕ್ಷೆ.. ಅತಂತ್ರ ಫಲಿತಾಂಶ : ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿವೆ. ಹಲವು ಸಮೀಕ್ಷೆಗಳು ಅತಂತ್ರ ಸರ್ಕಾರದ ಭವಿಷ್ಯ ನುಡಿದಿದೆ. ರಿಪಬ್ಲಿಕ್ ಟಿವಿ, ಟಿವಿ9 ಭಾರತವರ್ಷ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್​ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಸಿ ವೋಟರ್ ಕಾಂಗ್ರೆಸ್​ಗೆ ಬಹುಮತಕ್ಕೆ ಹತ್ತಿರ ಬರಲಿದೆ ಎಂದು ಹೇಳಿದ್ದು, ನ್ಯೂಸ್ ನೇಷನ್ ಸಮೀಕ್ಷೆಯಲ್ಲಿ ಬಿಜೆಪಿಗೆ ಅಧಿಕಾರಕ್ಕೆ ಬರಲಿದೆ ಎಂದು ನುಡಿದಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅತಂತ್ರ ಸರ್ಕಾರ ನಿರ್ಮಾಣವಾಗುವ ಮುನ್ಸೂಚನೆಯನ್ನು ಸಮೀಕ್ಷೆಗಳು ತಿಳಿಸಿವೆ.

ಇದನ್ನೂ ಓದಿ : Karnataka Exit polls: ಮತದಾನೋತ್ತರ ಸಮೀಕ್ಷೆಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಕೆಲವು ಕಡೆ ಮತಯಂತ್ರ ದೋಷ, ಕೆಲವು ಕಡೆ ಮತದಾರರ ಹೆಸರು ಇಲ್ಲದಿರುವುದು ಸೇರಿದಂತೆ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬುಧವಾರ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ, ಯುವಕರು, ಯುವತಿಯರು, ವೃದ್ಧರು ಉತ್ಸಾಹದಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದರು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಸುಮಾರು 72.63% ಮತದಾನವಾಗಿದೆ. ಮೇ 13ಕ್ಕೆ ನಿಜ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ : ಉತ್ತರಕನ್ನಡದಲ್ಲಿ ಗಾಳಿ ಸಹಿತ ಮಳೆ ಆರ್ಭಟ: ಮತಗಟ್ಟೆಗಳಲ್ಲಿ ಅಧಿಕಾರಿಗಳ ಪರದಾಟ

Last Updated : May 10, 2023, 11:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.