ರಾಣೆಬೆನ್ನೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿದ್ದೆನೆ. ಅದರಲ್ಲೂ ವಿಶೇಷವಾಗಿ ಶಿವಾಜಿನಗರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮೈತ್ರಿ ಸರ್ಕಾರವು ಜನವಿರೋಧಿ ಸರ್ಕಾರವಾಗಿತ್ತು. ಈಗ ಜನ ಅವರಿಬ್ಬರನ್ನು ತಿರಸ್ಕರಿಸಿ, ಬಿಜೆಪಿ ಬೆಂಬಲಿಸುತ್ತಿದ್ದಾರೆ ಎಂದರು.
17 ಜನ ಶಾಸಕರು ಮೈತ್ರಿ ಸರ್ಕಾರದ ರಗಳೆ ನೋಡಿ ರಾಜೀನಾಮೆ ನೀಡಿದರು. ಈಗ ಸಿದ್ದರಾಮಯ್ಯ ಒಬ್ಬಂಟಿಯಾಗಿ ಕೆಲ ನಾಯಕರ ಪರವಾಗಿ ನೆಪ ಮಾತ್ರಕ್ಕೆ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಅವರಿಗೆ ಈ ಉಪಚುನಾವಣೆಯಲ್ಲಿ ಸೋಲುವುದು ಗೊತ್ತಾಗಿದೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡಗಿಗೆ ಸೋಲಿಗೆ ನಾನು ಜವಾಬ್ದಾರನಲ್ಲ ಎಂದು ಮಾಹಿತಿ ನೀಡಿದ್ದಾರೆ.