ಹಾವೇರಿ : ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನ ಗುರುರಾಯಪಟ್ಟಣ ತಾಂಡಾ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನ 18 ವರ್ಷದ ಮಣಿಕಂಠ ಪಾಟೀಲ್ ಎಂದು ಗುರುತಿಸಲಾಗಿದೆ.
ಈತ ಬಸ್ ಓವರ್ಟೇಕ್ ಮಾಡಲು ಹೋದಾಗ ಬೈಕ್ನಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಮಣಿಕಂಠನನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧೈ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈತ ಬೈಕ್ ರಿಜಿಸ್ಟರ್ ಮಾಡಿಸಿ ವಾಪಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.