ಹಾವೇರಿ: ಮೊಬೈಲ್ ಬ್ಯಾಟರಿಯೊಂದಿಗೆ ಆಟವಾಡುತ್ತಿದ್ದ ವೇಳೆ ಬ್ಯಾಟರಿ ಸ್ಫೋಟಗೊಂಡಿದ್ದು 10 ವರ್ಷದ ಬಾಲಕ ಗಾಯಗೊಂಡಿರುವ ಘಟನೆ ಹಾವೇರಿಯ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ.
ಬಾಲಕ ಕಾರ್ತಿಕ್ ಕಲಾದಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಬಲಗೈಯ ನಾಲ್ಕು ಬೆರಳುಗಳು ತುಂಡಾಗಿವೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸೇರಿ ಬಾಲಕನನ್ನು ಸವಣೂರು ತಾಲೂಕು ಆಸ್ಪತ್ರೆಗೆ ಸೇರಿಸಿದರು.
ಘಟನೆಯಲ್ಲಿ ಬಾಲಕನ ಎದೆ ಮತ್ತು ಕಣ್ಣಿಗೂ ಗಾಯವಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ಕಳುಹಿಸಿ ಕೊಡುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಅವಾಚ್ಯ ಪದ ಬಳಕೆ : ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದ ಪಾಪಿಗಳು..