ಹಾವೇರಿ : ಸಾರಿಗೆ ಬಸ್ ಪಲ್ಟಿಯಾಗಿ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.
ಓದಿ: ಬೆಂಗಳೂರಲ್ಲಿ ಕಂಟ್ರೋಲ್ಗೆ ಸಿಗದ ಕೊರೊನಾ: ಇಂದು 786 ಜನರಿಗೆ ತಗುಲಿದ ಸೋಂಕು
ಬ್ಯಾಡಗಿ ಡಿಪೋಗೆ ಸೇರಿದ ಬಸ್ ರಾಣೆಬೆನ್ನೂರು ಕಡೆ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.